ದೇಶದ ಪ್ರತಿ ಮತದಾರನನ್ನೂ ತಲುಪಲು ಪ್ರಯತ್ನಿಸಿ: ಕಾರ್ಯಕಾರಿಣಿ ಸಭೆಯಲ್ಲಿ ಮೋದಿ ಕರೆ

2024ರ ಸಾರ್ವತ್ರಿಕ ಚುನಾವಣೆಗೆ ಇನ್ನು ಕೇವಲ 400 ದಿನ ಉಳಿದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆದಿದೆ. ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಮತದಾರರನ್ನು ತಲುಪಲು ಕಾರ್ಯಕರ್ತರು ಪ್ರಯತ್ನಿಸಬೇಕು. ಜನರ ಸೇವೆಗಾಗಿ ಸಾಧ್ಯವಾದಷ್ಟು ಕೆಲಸ ಮಾಡಬೇಕಾಗಿದೆ ಎಂದು ಕರೆ ನೀಡಿದ್ದಾರೆ. ಎಂಬುದಾಗಿ ಸಭೆ ಮುಕ್ತಾಯದ ಬಳಿಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮೋದಿ ಭಾಷಣದ ಕುರಿತು ಮಾಹಿತಿ ನೀಡಿದ್ದಾರೆ.