ಕಿವಿಗೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ, ಸದನದಲ್ಲಿ ಕೋಲಾಹಲ

ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆಗೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಿವಿಗೆ ಚೆಂಡು ಹೂ ಇಟ್ಟುಕೊಂಡು ಬಂದು ಎಲ್ಲರ ಗಮನ ಸೆಳೆದರು.
ಇದೇ ವೇಳೇ ಸಿದ್ದರಾಮಯ್ಯ ಅವರನ್ನು ಕಿಚಾಯಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಮುಂದಿನ ಸಲವೂ ಸಿದ್ದರಾಮಯ್ಯ ಹೂವು ಇಟ್ಟುಕೊಳ್ಳುತ್ತಾರೆ ಅಂತ ತಿಳಿಸಿದರು.
ಆರ್ಥಿಕವಾಗಿ ಹಿಂದುಳಿದವರಿಗೆ ಸಿಹಿ ಸುದ್ದಿ : ವಸತಿ ಯೋಜನೆ ಅಡಿಯಲ್ಲಿ ಹತ್ತು ಸಾವಿರ ಸೈಟ್ ವಿತರಣೆ
ಆರ್ಥಿಕವಾಗಿ ಹಿಂದುಳಿದವರಿಗೆ ಸಿಹಿ ಸುದ್ದಿಯನ್ನು ಇಂದು ಮಂಡನೆಯಾಗುತ್ತಿರುವ ರಾಜ್ಯ ಬಜೆಟ್ನಲ್ಲಿ ನೀಡಲಾಗಿದ್ದು, ನೆಲೆ ಯೋಜನೆ ಅಡಿಯಲ್ಲಿ ವಸತಿ ಯೋಜನೆ ಅಡಿಯಲ್ಲಿ ಹತ್ತು ಸಾವಿರ ಸೈಟ್ ವಿತರಣೆ ಮಾಡುವುದಾಗಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿವರು ಹೇಳಿದ್ದಾರೆ.
ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು.