ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ; ಆಸ್ಪತ್ರೆ ಸುತ್ತ ಹೆಚ್ಚಿದ ಭದ್ರತೆ
ಮಂಗಳೂರು: ಸೂಸೈಡ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ನಡೆಯುತ್ತಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಐಸಿಆರ್ ಮಾಡಿದ ಪೋಸ್ಟ್ ನಲ್ಲೇ ಉಗ್ರರು ಈ ಹತ್ಯೆಯ ಸುಳಿವು ನೀಡಿದ್ದಾರೆ. ಇದೇ ಕಾರಣಕ್ಕೆ ಶಾರೀಕ್ ಚಿಕಿತ್ಸೆ ಪಡೆಯಿತ್ತಿರೋ ಆಸ್ಪತ್ರೆಗೆ ಪೊಲೀಸರು ಭಾರೀ ಬಂದೋಬಸ್ತ್ ನೀಡಿದ್ದಾರೆ. ಹ್ಯಾಂಡ್ಲರ್ ಗಳು ಸ್ಲೀಪರ್ ಸೆಲ್ಗಳನ್ನು ಆಕ್ಟೀವ್ ಮಾಡಿಸಿ ದಾಳಿ ನಡೆಸೋ ಸಾಧ್ಯತೆ ಇದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೀತಿರೋ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.