ಕುತೂಹಲ ಮೂಡಿಸಿದ ಕೆಸಿಎನ್-ಅಮಿತ್ ಷಾ ಭೇಟಿ

ದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿದೆ.
ಇನ್ನು ಸಚಿವ ಕೆ.ಸಿ.ನಾರಾಯಣಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಿನ್ನಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬುಧವಾರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಕೆಸಿಎನ್ಗೆ ಪಕ್ಷ ಬಿಡದಂತೆ ತಿಳಿ ಹೇಳಲಾಗಿತ್ತು.
ಇಂದು ನಾರಾಯಣ ಗೌಡರನ್ನು ದೆಹಲಿಗೆ ಕರೆಸಿಕೊಂಡಿದ್ದ ಅಮಿತ್ ಷಾ ಪಕ್ಷ ತೊರೆಯದಂತೆ ಸೂಚನೆ ನೀಡಿದ್ದಾರೆ. ಪಕ್ಷದ ನಾಯಕರ ಸೂಚನೆಯಂತೆ ಬಿಜೆಪಿಯಲ್ಲೇ ಉಳಿಯಲು ಕೆಸಿಎನ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.