ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ 30 ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ 30 ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ನಗರದ ಸ್ಯಾಂಕಿ ಕೆರೆ ರಸ್ತೆಯನ್ನು ವಿಸ್ತರಣೆ ಮಾಡಬೇಕು ಹಾಗೂ ಸೇತುವೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 30 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಫೆ.20ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಯಾಂಕಿ ಕೆರೆ ರಸ್ತೆ ವಿಸ್ತರಣೆ, ಸೇತುವೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಗೆ ಅನುಮತಿಯನ್ನು ಕೂಡ ಪೊಲೀಸರಿಂದ ಪಡೆದಿರಲಿಲ್ಲ ಎನ್ನಲಾಗಿದೆ.

ಅನುಮತಿ ಪಡೆಯದೇ ಬೆಂಗಳೂರಿನ ಭಾಷ್ಯಂ ಸರ್ಕಲ್ ನಲ್ಲಿ ಪ್ರತಿಭಟನೆಯನ್ನು ಡಿಕೆಶಿ ನೇತೃತ್ವದಲ್ಲಿ ರಮೇಶ್ ಬಾಬು, ಉಮಾ ಬಾಯಿ, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿದಂತೆ 30 ಮಂದಿ ನಡೆಸಿದ್ದಕ್ಕಾಗಿ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೊಲೀಸರು ದಾಖಲಿಸಿಕೊಂಡಿರುವಂತ ಸ್ವಯಂ ದೂರಿನಲ್ಲಿ, ಅನುಮತಿ ಪಡೆಯದೇ ಅತಿಕ್ರಮವಾಗಿ ಗುಂಪು ಸೇರಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ಅಡ್ಡಿ ಉಂಟು ಮಾಡಲಾಗಿದೆ ಎಂದು ನಮೂದಿಸಲಾಗಿದೆ