ಕೆಲವರು ತಮ್ಮ ಕ್ಷೇತ್ರಕ್ಕೆ ಮಾತ್ರ ಮಂತ್ರಿಯಾಗಿದ್ದಾರೆ; ಆಡಳಿತ ಪಕ್ಷ ಬಿಜೆಪಿ ಶಾಸಕರಿಂದಲೇ ಅಸಮಾಧಾನ

ಧಾರವಾಡ: ಸಚಿವರ ಕಾರ್ಯವೈಖರಿ ಬಗ್ಗೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ಫಲ ಪುಷ್ಪ ಪ್ರದರ್ಶನ ಉದ್ಘಾಟನೆಗೆ ಸಚಿವರು ಬಾರದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಬಹುತೇಕ ಸಚಿವರು ಉತ್ತರ ಕರ್ನಾಟಕ ಭಾಗವನ್ನು ನೋಡೇ ಇಲ್ಲ.
ಇವತ್ತಿನ ರಾಜಕಾರಣ ಕಲುಷಿತ ವಾತಾವರಣದಿಂದ ಕೂಡಿದೆ. ಆದರೂ ಕೆಲವು ಸಚಿವರಾದರು ತಮ್ಮ ಜವಾಬ್ದಾರಿ ನಿಭಾಯಿಸಬೇಕು. ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುತ್ತೇನೆ. ರಾಜ್ಯ ಪ್ರವಾಸ ಮಾಡಲು ಸಚಿವರಿಗೆ ಸೂಚಿಸುವಂತೆ ತಿಳಿಸುತ್ತೇನೆ ಎಂದರು.
ಭಾರಿ ಮಳೆಯಿಂದ ರಾಜ್ಯದ ಹಲವೆಡೆ ಅಪಾರ ಹಾನಿ ಉಂಟಾಗಿದೆ. ಅಧಿಕಾರಿಗಳು ಕೂಡ ಬೆಂಗಳೂರು ಬಿಡುತ್ತಿಲ್ಲ ಎಂದು ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.