ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ಕರ್ನಾಟಕ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ಕರ್ನಾಟಕ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಗಡಿ ವಿವಾದ ಸಂಬಂಧ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಸಂಸದರು, ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ಸಂಸದರಿಗೆ ಸೂಚಿಸಿದ್ದಾರೆ. ಅಲ್ಲದೇ, ಮಹಾರಾಷ್ಟ್ರದ ನಿಯೋಗವು ಕೇಂದ್ರ ಗೃಹಸಚಿವರನ್ನು ಭೇಟಿಯಾಗುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.