ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್'ಗೆ ದಾಖಲು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್'ಗೆ ದಾಖಲು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.
ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳು ತಿಳಿಸಿವೆ.