ಕೇರಳದಲ್ಲಿ ವಿಚಿತ್ರ ಘಟನೆ ; ತನ್ನ ಚಿತೆಗೆ ತಾನೆ ಬೆಂಕಿ ಹಚ್ಚಿಕೊಂಡು ವೃದ್ಧ ಸಾವು!
ಕೇರಳ : ತನ್ನ ಚಿತೆಯನ್ನು ತಾನೆ ಸಿಂಗರಿಸಿ, ಅದಕ್ಕೆ ಬೆಂಕಿ ಹಚ್ಚಿಕೊಂಡು 68 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮೃತ ವೃದ್ಧನನ್ನು ವಿಜಯಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಕೊಲ್ಲಂ ಜಿಲ್ಲೆಯ ಪುತ್ತೂರಿನ ಮಾರನಾಡು ನಿವಾಸಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರು ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲ ದಿನಗಳಿಂದ ಕೆಲಸಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.ಇದರಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿ ತನ್ನ ಸ್ನೇಹಿತನನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, ತನ್ನ ಆರೋಗ್ಯದ ಸ್ಥಿತಿಯಿಂದ ಇನ್ನು ಮುಂದೆ ಕೆಲಸ ಮಾಡಲು ಸಾಧ್ಯವಾಗದ ಕಾರಣ ತನ್ನ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.