ಕೇಸರಿ ಪಾಳಯದಲ್ಲಿ ಸಂಚಲನ ಮೂಡಿಸಿದ ಅಮಿತ್ ಶಾ ನಡೆ; ವಿಜಯೇಂದ್ರಗೆ ಬೆನ್ನು ತಟ್ಟಿ ಆಲಂಗಿಸಿದ ಚುನಾವಣಾ ಚಾಣಾಕ್ಯ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಉಪಹಾರ ಕೂಟ ಆಯೋಜಿಸಲಾಗಿದ್ದು, ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆ ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.
ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಯಡಿಯೂರಪ್ಪನವರು ಹೂಗುಚ್ಛ ನೀಡಿ ಸ್ವಾಗತಿಸಲು ಮುಂದಾದರು.
ಅಮಿತ್ ಶಾ ನಡೆ ಕಂಡು ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಮುಖದಲ್ಲಿ ಮಂದಹಾಸ.ಸಂತಸ. ಬಳಿಕ ಯಡಿಯೂರಪ್ಪನವರು ಪ್ರತ್ಯೇಕವಾಗಿ ಹೂಗುಚ್ಛ ನೀಡಿ ಅಮಿತ್ ಶಾ ಅವರನ್ನು ಬರಮಾಡಿಕೊಂಡರು. ಸ್ವತಃ ಅಮಿತ್ ಶಾ ಅವರೇ ವಿಜಯೇಂದ್ರ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನವನ್ನುಂಟು ಮಾಡಿದೆ.