ಕೈ ತಪ್ಪಿದ ಚಿಹ್ನೆ: ಸುಪ್ರೀಂ ಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ
ಹೊಸದಿಲ್ಲಿ: ಏಕನಾಥ್ ಶಿಂಧೆ ಬಣವನ್ನು ಅಧಿಕೃತ ಶಿವಸೇನೆ ಎಂದು ಗುರುತಿಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರದ ವಿರುದ್ಧ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಇಸಿಐ ನಿರ್ಧಾರವನ್ನು ಪ್ರಶ್ನಿಸುವ ಮನವಿಯನ್ನು ಪ್ರಸ್ತಾಪಿಸಿದರು.
ಕಳೆದ ವಾರ, ಚುನಾವಣಾ ಆಯೋಗವು ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆ ಪಕ್ಷದ ಹೆಸರು ಮತ್ತು ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ನೀಡಿತು.