ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಮಲ್ಲಿಕಾರ್ಜುನ ಖರ್ಗೆ, ಕೈ ಸಂಸದರು ಹಾಜರಾಗೋದು ಡೌಟು?. ಕಾರಣ?
ಶ್ರೀನಗರ: ಪ್ರತಿಕೂಲ ಹವಾಮಾನದ ಕಾರಣ ಶ್ರೀನಗರದಿಂದ ವಿಮಾನಗಳು ವಿಳಂಬವಾದ ಹಿನ್ನೆಲೆ ಇಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಕಾಂಗ್ರೆಸ್ ಸಂಸದರು ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪಕ್ಷದ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಸೋಮವಾರ ನಡೆದ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಬಾಗವಹಿಸಲು ಬಂದಿದ್ದ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಸಂಸದರು ಶ್ರೀನಗರದಲ್ಲಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ಕಾರ ಸೋಮವಾರ ಕರೆದಿದ್ದ ವಿವಿಧ ರಾಜಕೀಯ ಪಕ್ಷಗಳ ಸಭೆಗೆ ಕಾಂಗ್ರೆಸ್ ನಾಯಕರು ಹಾಜರಾಗಲು ಸಾಧ್ಯವಾಗಲಿಲ್ಲ. ಪಕ್ಷದ ಹಿರಿಯ ಸಂಸದ ನಾಸೀರ್ ಹುಸೇನ್ ಅವರು ಸಭೆಯಲ್ಲಿ ಭಾಗವಹಿಸಬೇಕಿತ್ತು ಆದರೆ ಭಾರೀ ಹಿಮಪಾತದಿಂದಾಗಿ ಶ್ರೀನಗರದಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಯಿತು.
ʻಪ್ರತಿಕೂಲ ಹವಾಮಾನದ ಕಾರಣ ಶ್ರೀನಗರ ವಿಮಾನ ನಿಲ್ದಾಣದಿಂದ ವಿಮಾನಗಳು ವಿಳಂಬವಾದ ಹಿನ್ನೆಲೆ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಅನೇಕ ಕಾಂಗ್ರೆಸ್ ಸಂಸದರು ಇಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ (sic)ʼ ಎಂದು ರಮೇಶ್ ಮಂಗಳವಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷ ಬಜೆಟ್ ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿಗಳು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಾರೆ. ಇದು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅಧ್ಯಕ್ಷ ದ್ರೌಪದಿ ಮುರ್ಮು ಅವರ ಚೊಚ್ಚಲ ಭಾಷಣವಾಗಿದೆ.