ಕೊಡಗಿನ ಕಾನೂರಿನಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಕೊಡಗಿನ ಕಾನೂರಿನಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಕೊಡಗು: ಜಿಲ್ಲೆಯ ಪೊನ್ನಂಪೇಟೆಯ ಕಾನೂರು ಸಮೀಪದ ಬ್ರಹ್ಮಗಿರಿಯ ರಸ್ತೆಯಲ್ಲೇ ಹುಲಿಯೊಂದು ಕಾಣಿಸಿಕೊಂಡಿದೆ. ಹುಲಿ ರಸ್ತೆಯಲ್ಲೇ ನಡೆದು ಹೋಗುತ್ತಿದ್ದನ್ನು ಕಂಡಂತ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಕೊಡಗಿನ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದ ಬ್ರಹ್ಮಗಿರಿಯಲ್ಲಿ ಶನಿವಾರ ಮಧ್ಯಾಹ್ನ ಹುಲಿಯೊಂದು ಕಾಣಿಸಿಕೊಂಡಿದೆ.

ರಸ್ತೆ ಬದಿ ಹುಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಕಾನೂರು ಬಳಿಯಲ್ಲಿ ಹುಲಿ ಕಾಣಿಸಿಕೊಂಡಿರೋ ಕಾರಣ, ಬ್ರಹ್ಮಗಿರಿ ಪ್ರದೇಶ ಸುತ್ತಮುತ್ತಲಿನ ಪ್ರದೇಶದಲ್ಲಿನ ಕಾಫಿ ತೋಟಕ್ಕೆ ಕಾರ್ಮಿಕರು ಕೆಲಸಕ್ಕೆ ತೆರಳೋದಕ್ಕೆ ಭಯಪಡುವಂತೆ ಆಗಿದೆ. ಅಲ್ಲದೇ ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಒತ್ತಾಯಿಸಿದ್ದಾರೆ.

ಇತ್ತೀಚಿಗೆ ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಹುಲಿಯು ಇಬ್ಬರನ್ನು ಬಲಿ ಪಡೆದಿತ್ತು. ಮನೆಯ ಬಳಿಯಲ್ಲಿ ಆಟವಾಡುತ್ತಿದ್ದ ಬಾಲಕ ಹಾಗೂ ಮೊಮ್ಮಗನನ್ನು ನೋಡೋದಕ್ಕೆ ಬಂದ ತಾತನನ್ನು ಕೊಂದು ಹಾಕಿತ್ತು. ಈ ಬೆನ್ನಲ್ಲೇ ನಿನ್ನೆ ಹುಲಿ ರಸ್ತೆಯಲ್ಲೇ ಓಡಾಡುತ್ತಿರುವುದು ಕಂಡು ಬಂದಿದ್ದು, ಜನರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟು ಹಾಕಿದೆ.