ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ

ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸಚಿವ ಬಿ.ಸಿ.ನಾಗೇಶ್ ಅವರು ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಡಿಡಿಪಿಐ, ಬಿಇಒ ಸೇರಿದಂತೆ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದು, ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ.

ಸಭೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ್ರೆ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.