ಕಲಬುರಗಿಯಲ್ಲಿ 'ಗುಂಡಿನ ಸದ್ದು' : ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ಕಲಬುರಗಿ : ಕಲಬುರಗಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು, ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಆತನನ್ನು ಬಂಧಿಸಿದ್ದಾರೆ.ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ ಮಾಡಿರುವ ಪ್ರಕರಣದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಆತನನ್ನು ಬಂಧಿಸಿದಿದ್ದಾರೆ.
ಅರೋಪಿ ಮಂಜುನಾಥ್ ಬಲಗಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದು, ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಪೇದೆ ಸಿದ್ರಾಮಯ್ಯ ಸ್ವಾಮಿ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.