ಕೊಹಿಮಾ: ಮಾ.7ರಂದು ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ ಸರ್ಕಾರ ಅಸ್ತಿತ್ವಕ್ಕೆ

ಕೊಹಿಮಾ: ಮಾ.7ರಂದು ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ ಸರ್ಕಾರ ಅಸ್ತಿತ್ವಕ್ಕೆ

ಕೊಹಿಮಾ: ಆಡಳಿತಾರೂಢ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ), ಮಿತ್ರ ಪಕ್ಷವಾದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಜೊತೆಗೆ 60 ಸದಸ್ಯ ಬಲದ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಗೆಲ್ಲುವ ಮೂಲಕ ನಾಗಾಲ್ಯಾಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಂಡಿದೆ.

ಮಾರ್ಚ್ 7 ರಂದು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ಮಾರ್ಚ್ 7 ರಂದು ಕೊಹಿಮಾದಲ್ಲಿ ಮುಖ್ಯಮಂತ್ರಿ ಮತ್ತು ಇತರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಬಿಜೆಪಿ ನಾಯಕರು ಮತ್ತು ಸಚಿವರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಶುಕ್ರವಾರ ಎನ್‌ಡಿಪಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಿರ್ಗಮಿತ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಶನಿವಾರ ರಾಜ್ಯಪಾಲ ಲಾ ಗಣೇಶನ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಭಾನುವಾರ ಮೈತ್ರಿ ಪಾಲುದಾರ ಬಿಜೆಪಿಯೊಂದಿಗಿನ ಸಭೆಯ ನಂತರ ರಿಯೊ ಸೋಮವಾರ ಮುಂದಿನ ಸರ್ಕಾರ ರಚಿಸಲು ಹಕ್ಕುಮಂಡನೆ ಸಾಧ್ಯತೆಯಿದೆ ಎಂದು ಎನ್‌ಡಿಪಿಪಿ ಮೂಲಗಳು ತಿಳಿಸಿವೆ. ನಾಗಾಲ್ಯಾಂಡ್‌ನ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ರಿಯೊ (72) ಮಾರ್ಚ್ 7 ರಂದು 5ನೇ ಬಾರಿಗೆ ಉನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.