ಕೋರ್ಟ್ನಿಂದ ಸಮನ್ಸ್: ಪೊಲೀಸ್ ಠಾಣೆ ಮೇಲೇರಿ ಮಹಿಳೆ ಆತ್ಮಹತ್ಯೆ ಯತ್ನ
ಚಿಕ್ಕಮಗಳೂರು: ಪ್ರಕರಣ ಸಂಬಂಧ ಕೋರ್ಟ್ನಿಂದ ಸಮನ್ಸ್ ಬಂದ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೇಲೇರಿ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಈಕೆ ವಿರುದ್ದ ಪ್ರಕರಣವೊಂದರ ಸಲವಾಗಿ ಠಾಣೆಗೆ ಆಗಮಿಸಿದ್ದ ವೇಳೆಯಲ್ಲಿ, ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಎಂದು ದೂರು ದಾಖಲಾಗಿತ್ತು.