ಕೋಲಾರದಿಂದ ಸಿದ್ದು ಸ್ಪರ್ಧೆ ಸದ್ಯ ಪಕ್ಕಾ

ಕೋಲಾರದಿಂದ ಸಿದ್ದು ಸ್ಪರ್ಧೆ ಸದ್ಯ ಪಕ್ಕಾ

ಬೆಂಗಳೂರು: ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸುರಕ್ಷಿತ ಕ್ಷೇತ್ರದ ಹುಡುಕಾಟದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಬಾದಾಮಿ, ವರುಣಾ, ಚಾಮುಂಡೇಶ್ವರಿ, ಚಾಮರಾಜಪೇಟೆ, ಕೋಲಾರ, ಹೆಬ್ಟಾಳ ಕ್ಷೇತ್ರ ಗಳ ಹೆಸರು ಪರಿಶೀಲನೆ ಯಲ್ಲಿತ್ತಾದರೂ ಅಂತಿಮವಾಗಿ ಕೋಲಾರದಲ್ಲಿ ಸ್ಪರ್ಧೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ 6 ತಿಂಗಳಿನಿಂದ ಒತ್ತಡ ಹೇರುತ್ತಿದ್ದ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಮಾಜಿ ಸಚಿವರಾದ ಕೃಷ್ಣಬೈರೇ ಗೌಡ, ನಜೀರ್‌ ಅಹಮದ್‌ ತಂಡ ಸಿದ್ದು ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಪುರಾಣ ಪ್ರಸಿದ್ಧ ಸೀತಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಮೂಲಕ ಶೀಘ್ರವೇ ಚುನಾ ವಣೆ ಪ್ರಚಾರಕ್ಕೂ ಚಾಲನೆ ನೀಡಲು ತೀರ್ಮಾನಿಸ ಲಾಗಿದೆ. ಇದೇ ಸಂದರ್ಭ ದಲ್ಲಿ ಕೋಲಾರದಲ್ಲಿ ಬೃಹತ್‌ ಸಮಾವೇಶ ಸಹ ಆಯೋ ಜಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.