ಕೋವಿಡ್ ಕಂಟ್ರೋಲ್' ಗೆ ರಾಜ್ಯ ಸರ್ಕಾರದಿಂದ ಮಹತ್ವದ ಸಭೆ

ಕೋವಿಡ್ ಕಂಟ್ರೋಲ್' ಗೆ ರಾಜ್ಯ ಸರ್ಕಾರದಿಂದ ಮಹತ್ವದ ಸಭೆ

ಬೆಂಗಳೂರು:ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಭಾರತದಲ್ಲೂ ಆತಂಕ ಶುರುವಾಗಿದ್ದು, ಕೇಂದ್ರ ಸರ್ಕಾರವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ್ದು, ಇಂದು ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ.

ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್​ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್​​​, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದರೆ, ರಾಜ್ಯ ಸರ್ಕಾರವು ಇಂದು ಉನ್ನತ ಮಟ್ಟದ ಸಭೆ ಕರೆದಿದೆ. ಸಭೆಯ ನಂತರ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ. ಬೆಂಗಳೂರಿ ನಗರಕ್ಕೆ ಪ್ರತ್ಯೇಕ ನಿಯಮ ಹಾಗೂ ಉಳಿದ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಪ್ರಮುಖವಾಗಿ ಮುಂಬರುವ ಹೊಸ ವರ್ಷದ ಸ್ವಾಗತ ಕಾರ್ಯಕ್ರಮಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಯೋಜನೆ ಮತ್ತು ಸಂಭ್ರಮಾಚರಣೆಗೆ ನಿರ್ಬಂಧ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಲಸಿಕೆ ಏರಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಲಿದೆ. ಬಳಿಕ ಹೊಸ ಮಾರ್ಗಸೂಚಿ ಹೊರಬೀಳುವ ಸಾಧ್ಯತೆ ಇದೆ.