ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 2,678 ಹೊಸ ಸೋಂಕು ಪ್ರಕರಣ ಪತ್ತೆ, 10 ಸಾವು

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 2,678 ಹೊಸ ಸೋಂಕು ಪ್ರಕರಣ ಪತ್ತೆ, 10 ಸಾವು
ಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,678 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,678 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ 2,678 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು COVID-19 ಪ್ರಕರಣಗಳ ಸಂಖ್ಯೆಯನ್ನು 4,46,23,997ಕ್ಕೆ ತಲುಪಿದೆ. ಅಂತೆಯೇ ಇದೇ ಅವಧಿಯಲ್ಲಿ ದೇಶದಲ್ಲಿ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 5,28,857ಕ್ಕೆ ಏರಿದೆ.ನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 2,594 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟಾರೆ ಸಂಖ್ಯೆ 4,40,68,557ಕ್ಕೆ ಏರಿಕೆಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿ 26,583 ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.06 ಪ್ರತಿಶತವನ್ನು ಒಳಗೊಂಡಿದ್ದು, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.76 ಪ್ರತಿಶತಕ್ಕೆ ಏರಿಕೆಯಾಗಿದೆ. ಅಂತೆಯೇ ದೈನಂದಿನ ಸಕಾರಾತ್ಮಕತೆಯ ದರವು 1.13 ಪ್ರತಿಶತದಷ್ಟು ದಾಖಲಾಗಿದ್ದರೆ, ವಾರದ ಸಕಾರಾತ್ಮಕ ದರವು ಶೇ. 1.07 ರಷ್ಟಿದೆ.ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 219.21 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.