ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : `ಗಂಗಾ ಕಲ್ಯಾಣ ನೀರಾವರಿ ಯೋಜನೆ'ಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಮಡಿವಾಳ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಹೊಂದಿರಬಾರದು.
ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 98,000/-ಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು. ವೈಯುಕ್ತಿಕ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ರೂ.4.00 ಲಕ್ಷ ನಿಗಧಿಪಡಿಸಿದ್ದು, ಇದರಲ್ಲಿ ರೂ.3.50 ಲಕ್ಷ ಸಹಾಯಧನ ಹಾಗೂ ರೂ.50,000/-ಗಳ ಶೇ. 4ರ ಬಡ್ಡಿ ದರದ ಸಾಲ ಒಳಗೊಂಡಿದೆ.
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ರೈತರ ಹೆಸರು. ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್‌ಕಾರ್ಡ್‌ನಲ್ಲಿ ಇರುವಂತೆ ಹೆಸರು ಹೊಂದಾಣಿಕೆಯಾಗಬೇಕು.
ಅರ್ಜಿಗಳನ್ನ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮಒನ್, ಬೆಂಗಳೂರುಒನ್ ಮತ್ತು ಕರ್ನಾಟಕಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬಯಸುವ ಅರ್ಜಿದಾರರು ಹಿಂದೆ ನಿಗಮದ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ 2023ರ ಮಾರ್ಚ್ 03 ರವರೆಗೆ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kmmd.karnataka.gov.in ಅಥವಾ ಸಂಬಂಧಪಟ್ಟ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050773004/5, ಅಥವಾ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-29605761 ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.