ಗಾಂಧಿ ಕುಟುಂಬದ ರಬ್ಬರ್ ಸ್ಟ್ಯಾಂಪ್ ಎಂಬ ಕಳಂಕದಿಂದ ಖರ್ಗೆಗೆ ಮುಕ್ತಿ ಯಾವಾಗ ?

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮತದಾನ ಮುಕ್ತಾಯವಾಗಿದೆ. ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಎ.ಐ .ಸಿ .ಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡರೆ ಖರ್ಗೆಯ ಹಾದಿ ಅಷ್ಟೇನು ಸುಲಭವಲ್ಲ.
ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಆಯ್ಕೆಗೊಳ್ಳುವ ಮೊದಲೇ ಬಿಜೆಪಿ ಅವರಿಗೆ ರಬ್ಬರ್ ಸ್ಟ್ಯಾಂಪ್ ಅಧ್ಯಕ್ಷ ಎಂಬ ಪಟ್ಟ ಕಟ್ಟಿದೆ. ನಾನು ಗಾಂಧಿ ಕುಟುಂಬ ಸಲಹೆ ಪಡೆಯುವುದರಲ್ಲಿ ತಪ್ಪೇನಿದೆ ಎಂದು ಖರ್ಗೆ ಮರುಪ್ರಶ್ನೆ ಹಾಕಿದರೂ ರಬ್ಬರ್ ಸ್ಟ್ಯಾಂಪ್ ಅಧ್ಯಕ್ಷ ಎಂಬ ಹಣೆಪಟ್ಟಿ ಮೀರಿ ನಡೆದುಕೊಳ್ಳುವುದು ಹಾಗೂ ನಿರ್ಧಾರಗಳನ್ನು ಕೈಗೊಳ್ಳುವುದು ಖರ್ಗೆ ಪಾಲಿಗೆ ಸವಾಲಿನ ಸಂಗತಿಯಾಗಿದೆ.