ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಬಾಲಿವುಡ್‌ನ ಈ ಸ್ಟಾರ್‌ ಜೋಡಿ

ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಬಾಲಿವುಡ್‌ನ ಈ ಸ್ಟಾರ್‌ ಜೋಡಿ

ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಪಾಲಕರಾಗುತ್ತಿದ್ದಾರೆ. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಸಿನಿಮಾದಲ್ಲಲ್ಲ, ಬದಲಾಗಿ ರಿಯಲ್ ಲೈಫ್‌ನಲ್ಲಿ. ಕಳೆದ ಏಪ್ರಿಲ್ ತಿಂಗಳಲ್ಲಿ ಮದುವೆಯಾಗಿದ್ದ ಈ ಜೋಡಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.

ರಣಬೀರ್ ಕಪೂರ್ ಮಗುವಿನ ಸ್ಕ್ಯಾನಿಂಗ್ ಫೋಟೊ ನೋಡುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಆಲಿಯಾ "ನಮ್ಮ ಮಗು ಬರುತ್ತಿದೆ" ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಒಂದು ಸಿಂಹದ ಕುಟುಂಬವನ್ನು ಕೂಡ ಹಂಚಿಕೊಂಡಿದ್ದಾರೆ. ಆಲಿಯಾ ಭಟ್ ಪೋಸ್ಟ್ ನೋಡಿ ಅವರ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಬಾಲಿವುಡ್ ಕಲಾವಿದರಾದ ಮೌನಿ ರಾಯ್, ಜಾಕ್ವೆಲಿನ್ ಫರ್ನಾಂಡೀಸ್, ರಿಧಿಮಾ ಕಪೂರ್, ಪ್ರಿಯಾಂಕಾ ಚೋಪ್ರಾ, ಟೈಗರ್ ಶ್ರಾಫ್ ಮುಂತಾದವರು ಈ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.ಏಪ್ರಿಲ್ 14ರಂದು ಖ್ಯಾತ ನಟ ರಣಬೀರ್ ಜೊತೆ ಹಸೆಮಣೆ ಏರಿದ್ದ ನಟಿ ಅಲಿಯಾ ಭಟ್ ಗರ್ಭಣಿ ಆಗಿರುವ ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.