ಬಾಗಲಕೋಟೆ: ಗುಳೇದಗುಡ್ಡದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ

ಬಾಗಲಕೋಟೆ: ಗುಳೇದಗುಡ್ಡದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡದಲ್ಲಿ ಸೋಮವಾರ ಜೆಡಿಎಸ್ ನ ಪಂಚರತ್ನ ಯಾತ್ರೆ ಅದ್ಧೂರಿಯಾಗಿ ನಡೆಯಿತು.ಎಚ್.ಡಿ. ಕುಮಾರಸ್ವಾಮಿ ಅವರನ್ನು ತೆರೆದ ವಾಹನದಲ್ಲಿ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು. ಅವರಿಗೆ ಗುಳೇದಗುಡ್ಡ ಖಣದಲ್ಲಿ ಸಿದ್ಧಪಡಿಸಲಾದ ಹಾರ ಹಾಕಲಾಯಿತು.ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ ಸರ್ಕಾರ‌ ರಚನೆಯಾಗಲಿದೆ. ಬಾದಾಮಿ ಕ್ಷೇತ್ರದಿಂದ ಜೆಡಿಸ್ ಅಭ್ಯರ್ಥಿ ಹನುಮಂತ ಮಾವಿನಮರದ‌ ಅವರನ್ನು ಗೆಲ್ಲಿಸಿ ಕಳುಹಿಸಿರಿ. ಸಚಿವರನ್ನಾಗಿ ಮಾಡುವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.