LPG Price Hike: ಗ್ಯಾಸ್ ಸಿಲಿಂಡರ್ ಬೆಲೆ 103.50 ರೂ ಹೆಚ್ಚಳ, ಇಲ್ಲಿದೆ ಮಾಹಿತಿ

LPG Price Hike: ಗ್ಯಾಸ್ ಸಿಲಿಂಡರ್ ಬೆಲೆ 103.50 ರೂ ಹೆಚ್ಚಳ, ಇಲ್ಲಿದೆ ಮಾಹಿತಿ

ನವದೆಹಲಿ: ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ (LPG gas cylinders) ಬೆಲೆಯನ್ನು ಹೆಚ್ಚಿಸಿವೆ.

ಮುಂದಿನ ವರ್ಷ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ 5 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು (Assembly elections) ಗಮನದಲ್ಲಿಟ್ಟುಕೊಂಡು ಮೋದಿ ಸರ್ಕಾರವು ಪೆಟ್ರೋಲ್, ಡೀಸೆಲ್‌ನಂತೆ ಗ್ಯಾಸ್ ಅನ್ನು ಕಡಿಮೆ ಮಾಡುತ್ತದೆ ಎಂದು ಜನರು ನಿರೀಕ್ಷಿಸಿದ್ದರು.

ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (Indian Oil Corporation) 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು (commercial gas cylinder) ಪ್ರತಿ ಸಿಲಿಂಡರ್‌ಗೆ 103.50 ರೂ.ವರೆಗೆ ಹೆಚ್ಚಿಸಿದೆ. ತೈಲ ಕಂಪನಿಗಳು 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ( subsidized LPG cylinders) ಬೆಲೆಯನ್ನು ಹೆಚ್ಚಿಸದಿರುವುದು ದೊಡ್ಡ ಸಮಾಧಾನದ ವಿಷಯವಾಗಿದೆ. ಇದರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

LPG ಬೆಲೆಯನ್ನು ಈ ರೀತಿ ಪರಿಶೀಲಿಸಿ :ಎಲ್ಪಿಜಿ ಸಿಲಿಂಡರ್ ಬೆಲೆಯನ್ನು (Cost of LPG cylinder) ಪರಿಶೀಲಿಸಲು, ನೀವು ಸರ್ಕಾರಿ ತೈಲ ಕಂಪನಿಯ ವೆಬ್‌ಸೈಟ್‌ಗೆ ಹೋಗಬೇಕು. ಇಲ್ಲಿ ಕಂಪನಿಗಳು ಪ್ರತಿ ತಿಂಗಳು ಹೊಸ ದರಗಳನ್ನು ನೀಡುತ್ತವೆ. https://iocl.com/Products/IndaneGas.aspx ಲಿಂಕ್‌ನಲ್ಲಿ ನಿಮ್ಮ ನಗರದ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ನೀವು ಪರಿಶೀಲಿಸಬಹುದು.