ಚಪ್ಪಲಿ ಎಸೆದ ಘಟನೆ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ನಟ ದರ್ಶನ್
ಚಪ್ಪಲಿ ಎಸೆದ ಘಟನೆ ಬಗ್ಗೆ ನಟ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ಈ ಸಮಯದಲ್ಲಿ ನನಗಿಂತಲೂ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ ಎಂಬ ಅರಿವು ನನಗಿದೆ. ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತವೆ ಹೊರತು ಬಲಹೀನನನ್ನಾಗಿ ಮಾಡುವುದಿಲ್ಲ. ಅದಕ್ಕೆ ತಕ್ಕ ಉದಾಹರಣೆಗಳು ನಮ್ಮ ಕನ್ನಡ ನೆಲದಲ್ಲೇ ನೋಡಿದ್ದೇವೆ. ಈ ಸಮಯದಲ್ಲಿ ನ್ಯಾಯದ ಪರ ನಿಂತ ಚಿತ್ರರಂಗದ ಪ್ರತಿಯೊಬ್ಬ ಗೆಳೆಯರು, ನಟರಿಗೆ ಧನ್ಯವಾದಗಳು. ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.