ಚರ್ಚ್ಗಳ ಮೇಲಿನ ದಾಳಿ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಕ್ರೈಸ್ತರಿಂದ ಪ್ರತಿಭಟನೆ
"ಉತ್ತರ ಪ್ರದೇಶದಲ್ಲಿ ಇಂತಹ ಪ್ರಕರಣಗಳ ಸಂಖ್ಯೆ 2020 ರಲ್ಲಿ 70 ಇತ್ತು. ಆದರೆ 2022 ರಲ್ಲಿ ಅದು 183 ಕ್ಕೆ ಏರಿಕೆಯಾಗಿದೆ" ಎಂದು ಅವರು ಹೇಳಿದ್ದಾರೆ. ಬಲವಂತದ ಮತಾಂತರದ ಆರೋಪದ ಮೇಲೆ ರಾಜ್ಯ ಪೊಲೀಸರು ಜನರನ್ನು ಬಂಧಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಫತೇಪುರ ನಿವಾಸಿ ಶಿವಪಾಲ್ ಅವರು ಆರೋಪಿಸಿದ್ದಾರೆ. "ಛತ್ತೀಸ್ಗಢ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ಚರ್ಚ್ಗಳ ಮೇಲೆ ದಾಳಿ ಮಾಡಲಾಗುತ್ತಿದೆ ಮತ್ತು ನಮ್ಮ ಸಮುದಾಯದವರಿಗೆ ಕಿರುಕುಳ ನೀಡಲಾಗುತ್ತಿದೆ. ಅಲ್ಲದೆ ಅವರ ವಿರುದ್ಧ ಸುಳ್ಳು ಆರೋಪಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ನಾವು ನಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಇಲ್ಲಿಗೆ ಬಂದಿದ್ದೇವೆ" ಎಂದು ದೆಹಲಿಯ ಪಂಜಾಬಿ ಬಾಗ್ ನಿವಾಸಿ ಪೂನಂ ಅವರು ಹೇಳಿದ್ದಾರೆ.