ಚಳಿಗೆ ತತ್ತರಿಸಿರುವ ಜನತೆಗೆ ಬಿಗ್ ಶಾಕ್ : ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ!

ಬೆಂಗಳೂರು : ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ವರ್ಷದ ಮೊದಲ ಮಳೆ ದಾಖಲಾಗಿದೆ. ಕೊಡಗು, ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಮಳೆಯಾಗಿದೆ. ಮಡಿಕೇರಿ, ಕುಶಾಲನಗರ, ಪೊನ್ನಂಪೇಟೆ, ವಿರಾಜಪೇಟೆ, ಸುಂಟಿಕೊಪ್ಪ, ಸಿದ್ದಾಪುರ, ಚೆಟ್ಟಳ್ಳಿ, ಪಾಲಿಬೆಟ್ಟ, ಕೊಟ್ಟಗೇರಿ, ಲಕ್ಕುಂದ, ಮಾಲ್ದಾರೆ ಸೇರಿ ಕೊಡಗಿನ ಹಲವೆಡೆ ಒಂದೂವರೆ ತಾಸು ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.