ಚಾಮರಾಜನಗರದಲ್ಲಿ 'ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ'

ಚಾಮರಾಜನಗರದಲ್ಲಿ 'ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ'

ಚಾಮರಾಜನಗರ : ಮುಂದಿನ ಚುನಾವಣೆಗೆ ರಣತಂತ್ರ ರೂಪಿಸಲು ರಾಜ್ಯದೆಲ್ಲೆಡೆ ಭರ್ಜರಿ ಸಿದ್ದತೆ ನಡೆಸಲಾಗುತ್ತಿದ್ದು, ಇದೀಗ ಚಾಮರಾಜನಗರದಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆನಡೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿಇಂದು ಚಾಮರಾಜನಗರ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಬೆ.11ಕ್ಕೆ ಹನೂರು, ಮ. 2 ಕ್ಕೆ ಕೊಳ್ಳೇಗಾಲ, ಸಂಜೆ 5 ಕ್ಕೆ ಗುಂಡ್ಲುಪೇಟೆ ಯಲ್ಲಿ ಸಮಾವೇಶ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಸೇರಿದಂತೆ ಜಿಲ್ಲಾ ಕೈ ಮುಖಂಡರು ಭಾಗಿಯಾಗಲಿದ್ದಾರೆ. ಚಾಮರಾಜನಗರದಾದ್ಯಂತ ಮುಂದಿನ ವಿಧಾನ ಸಭೆ ಚುನಾವಣೆ ಮತ ಪ್ರಚಾರಕ್ಕಾಗಿ ರಣ ತಂತ್ರ ರೂಪಿಸಲಿದ್ದಾರೆ.