ಚಿಂಚನಸೂರ ಅಲ್ಲ 'ಚಂಚಲ'ಶೂರ: ರವಿಕುಮಾರ್ ವ್ಯಂಗ್ಯ

ಚಿಂಚನಸೂರ ಅಲ್ಲ 'ಚಂಚಲ'ಶೂರ: ರವಿಕುಮಾರ್ ವ್ಯಂಗ್ಯ

ಲಬುರಗಿ: ಪಕ್ಷವು ಬಾಬುರಾವ ಚಿಂಚನಸೂರ ಅವರಿಗೆ ವಿಧಾನಪರಿಷತ್ ಸ್ಥಾನ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿತು. ಆದರೂ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಚಿಂಚನಸೂರ ಅಲ್ಲ 'ಚಂಚಲ'ಶೂರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.

ರವಿಕುಮಾರ್ ವ್ಯಂಗ್ಯ ಮಾಡಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಷ್ಟೆಲ್ಲ ಮಾಡಿದರೂ ಅವರು ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ ಎಂದರು ‌

ಪ್ರಿಯಾಂಕ್ ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ: ಚಿತ್ತಾಪುರ ವಿಧಾನಸಭಾ ಕ್ಷೇತದ ಶಾಸಕ ಪ್ರಿಯಾಂಕ್ ಖರ್ಗೆ ಅವರು ಯಾವ ಅಭಿವೃದ್ಧಿ ಕಾರ್ಯವನ್ನೂ ಮಾಡಿಲ್ಲ. ಹಾಗೆಯೇ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಅವರೂ ಯಾವ ಕೆಲಸವನ್ನೂ ಮಾಡಿಲ್ಲ‌. ಈ ಬಗ್ಗೆ ಬಿಜೆಪಿ ನಗರದ ಸರ್ದಾರ್ ಪಟೇಲ್ ವೃತ್ತದಲ್ಲಿ ಬಹಿರಂಗ ಚರ್ಚೆ ನಡೆಸಲಿದೆ. ಅವರು ಬರುತ್ತಾರೆಯೇ ಎಂದು ಸವಾಲು ಹಾಕಿದರು.

ಚಿತ್ತಾಪುರ ಕ್ಷೇತ್ರಕ್ಕೆ ಬೇರೆ ಜಿಲ್ಲೆಯ ಅಭ್ಯರ್ಥಿ ಸ್ಪರ್ಧಿಸುವುದಿಲ್ಲ. ಸ್ಥಳೀಯರಿಗೇ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.