ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಗಂಭೀರ ಗಾಯ

ಚಿಕ್ಕಮಗಳೂರು : ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ನಡೆದಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಶಿವು ಎಂದು ಗುರುತಿಸಲಾಗಿದೆ. ಈತ ಕಳೆದ ಹಲವು ದಿನ ಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯಾ ಕಾರ್ಯಕರ್ತನಾಗಿದ್ದನು, ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಈ ಕಾರಣಕ್ಕಾಗಿ ಶಾಸಕ ಟಿ.ಡಿ.ರಾಜೇಗೌಡ ಅವರ ಬೆಂಬಲಿಗರ ಸಿಟ್ಟಿಗೆ ಕಾರಣವಾಗಿದಲ್ಲದೇ ಸಣ್ಣ ಪುಟ್ಟ ಗಲಾಟೆಯೂ ನಡೆದಿತ್ತು. ಬುಧವಾರ ಶಿವು ಮನೆಗೆ ಏಕಾಏಕಿ ನುಗ್ಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಶಿವು ಗಂಭೀರ ಗಾಯಗೊಂಡಿದ್ದು,ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಬೆಂಬಲಿಗರು ಹಲ್ಲೆ ನಡೆಸಿದ್ದರೆಂದು ಶಂಕಿಸಲಾಗಿದ್ದು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.