ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಮನೆ, ಕಾಫಿ ಕ್ಯೂರಿಂಗ್ ಮೇಲೆ ಐಟಿ ಅಧಿಕಾರಿಗಳ ದಾಳಿ

ಚಿಕ್ಕಮಗಳೂರು: ನಗರದಲ್ಲಿರುವಂತ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಮನೆ, ಕಾಫಿ ಕ್ಯೂರಿಂಗ್ ಘಟಕದ ಮೇಲೆ ಇಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳ್ಳಂಬೆಳಿಗ್ಗೆ ಕಾಂಗ್ರೆಸ್ ಮುಖಂಡ ಅಕ್ಮಲ್ ನಿವಾಸ, ಅವರ ಒಡೆತನದ ಕಾಫಿ ಕ್ಯೂರಿಂಗ್ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು ಎಂಟು ಕಾರಿನಲ್ಲಿ ಬಂದಿರುವಂತ ಐಟಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಮನೆಯಲ್ಲಿ ಆದಾಯ ತೆರಿಗೆ ವಂಚನೆ ಸಂಬಂಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇನ್ನೂ ಕಾಂಗ್ರೆಸ್ ಮುಖಂಡ ಅಕ್ಮಲ್ ಮನೆಯ ಮೇಲೆ ಐಟಿ ರೈಡ್ ವಿಷಯ ತಿಳಿದಂತ ಅವರ ಅಭಿಮಾನಿಗಳು, ಕಾರ್ಯಕರ್ತರು, ಮನೆಯ ಮುಂದೆ ಪ್ರತಿಭಟನೆ ಕೂಡ ನಡೆಸಿದರು. ಹೀಗಾಗಿ ಅಕ್ಮಲ್ ಮನೆ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿತ್ತು.