ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಬೈಕ್ ಸವಾರರ ಮೇಲೆ ಗುಂಡಿನ ದಾಳಿ : ಇಬ್ಬರು ಸ್ಥಳದಲ್ಲೇ ಸಾವು!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಗುಂಡಿನ ದಾಳಿಗೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
ಚಿಕ್ಕಮಗಳುರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಚಂದ್ರುಳ್ಳಿಬಿದರೆ ಗ್ರಾಮದ ಬಳಿ ಉಜ್ಜಯಿನಿ ಗ್ರಾಮದ ರಮೇಶ್ ಎಂಬಾತ ಗುಂಡಿನ ದಾಳಿ ನಡೆಸಿ ಬೈಕ್ ನಲ್ಲಿ ತೆರಳುತ್ತಿದ್ದ ಸವಾರರಿಬ್ಬರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರನ್ನು ಚಂದ್ರುಳ್ಳಿಬಿದರೆ ಗ್ರಾಮದ ಪ್ರಕಾಶ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.