ಚುನಾವಣಾ ನೀತಿ ಸಂಹಿತೆ ಜಾರಿ; ಬೆಂಗಳೂರಿನಲ್ಲಿ ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ

ಚುನಾವಣಾ ನೀತಿ ಸಂಹಿತೆ ಜಾರಿ; ಬೆಂಗಳೂರಿನಲ್ಲಿ ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಸ್ವಂತ ಕಾರಿನಲ್ಲಿ ಓಡಾಡುತ್ತಿದ್ದಾರೆ.

ಇದೀಗ ಬೆಂಗಳೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ಹಾಕಲಾಗಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಮುಕ್ತಾಯವರೆಗೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು . ಏಪ್ರಿಲ್‌ ೧೦ರೊಳಗೆ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಇತ್ತ, ಸಂಸದ ದೇವೇಂದ್ರಪ್ಪ ಅವರು ಸರ್ಕಾರಿ ಬಿಟ್ಟು ಆಟೋದಲ್ಲಿ ಹೋಗಿದ್ದಾರೆ. ಇನ್ನು ಸಚಿವ ಕೆ.ಸಿ ನಾರಾಯಣಗೌಡ ತಾವು ಬಳಸುತ್ತಿದ್ದ ಕಾರಿಗೆ ಪೂಜೆ ಮಾಡಿಸಿ ಬಿಟ್ಟುಕೊಟ್ಟು ತಮ್ಮ ಸ್ವಂತ ಕಾರಿನಲ್ಲಿ ಹೋಗಿದ್ದಾರೆ.
ಹೌದು ಚುನಾವಣೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಸರ್ಕಾರಿ ವಾಹನ ಬಿಟ್ಟು ದೇವೇಂದ್ರಪ್ಪ ಆಟೋದಲ್ಲಿ ತಮ್ಮ ಮನೆಗೆ ತೆರಳಿದ್ದಾರೆ. ನಿನ್ನೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌, ಪುಮೇಯರ್‌ ಚುನಾವಣೆ ನಡೆದಿತ್ತು. ಈ ವೇಳೆ ಸಂಸದ ದೇವೇಂದ್ರಪ್ಪ ಅವರು ಪಾಲಿಕೆಗೆ ಬಂದಿದ್ದರು. ಈ ಸಂದರ್ಭದಲ್ಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚುನಾವನೆ ಮುಗಿಸಿ ಕಾರು ಬಿಟ್ಟು ಆಟೋದಲ್ಲಿ ಮನೆಗೆ ಹೋಗಿದ್ದಾರೆ.