ಚುನಾವಣೆ ಗೆಲ್ಲಲು ಬಿಜೆಪಿಯವರು 30 ಸಾವಿರ ಕೋಟಿ ರೂ. ಖರ್ಚು ಮಾಡಲಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಚುನಾವಣೆ ಗೆಲ್ಲಲು ಬಿಜೆಪಿಯವರು 30 ಸಾವಿರ ಕೋಟಿ ರೂ. ಖರ್ಚು ಮಾಡಲಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಓಲೈಕೆ ಮಾಡಲು ಬಿಜೆಪಿ ನಾಯಕರು ಆಮೀಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಚುನಾವಣೆ ಗೆಲ್ಲಲು ಬಿಜೆಪಿಯವರು 30 ಸಾವಿರ ಕೋಟಿ ರೂ.ಖರ್ಚು ಮಾಡಲು ಈಗಾಗಲೇ ತೀರ್ಮಾನ ಮಾಡಿದ್ದಾರೆ.

ಭ್ರಷ್ಟಾಚಾರದಿಂದ ಅಗಾಧವಾದ ದುಡ್ಡು ಸಂಪಾದಿಸಿಬಿಟ್ಟಿದ್ದಾರೆ. ಚುನಾವಣೆಯಲ್ಲಿ ಸೋಲ್ತೀವಿ ಅಂತ ಬಿಜೆಪಿಗೆ ಮನವರಿಕೆ ಆಗಿದೆ. ಹೀಗಾಗಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಹುನ್ನಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ ಶುರುವಾಗಿದ್ದು, ನ್ಯಾಯಸಮ್ಮತ ಚುನಾವಣೆ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಪ್ರಜಾಪ್ರಭುತ್ವ ಬುಡಮೇಲು ಮಾಡುವ ಹುನ್ನಾರ ನಡೆದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.