ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪಥನ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ 'ಕೈ'ಗೆ ಗುಡ್ ಬೈ
ಹಾವೇರಿ: ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೈ ತಪ್ಪಿದ ಕಾರಣದಿಂದಾಗಿ ಕೈಗೆ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಏಪ್ರಿಲ್ 7ರಂದು ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಸೇರುವುದಾಗಿ ತಿಳಿಸಿದ್ದಾರೆ.
ಇಂದು ಹಾನಗಲ್ ಕ್ಷೇತ್ರದಲ್ಲಿ ತನ್ನ ಬೆಂಬಲಿಗರ ಸಭೆ ನಡೆಸಿದಂತ ಅವರು, ಕಾಂಗ್ರೆಸ್ ಪಕ್ಷವನ್ನು ತೊರೆಯುವಂತ ನಿರ್ಧಾರವನ್ನು ಪ್ರಕಟಿಸಿದರು. ಅಲ್ಲದೇ ಏಪ್ರಿಲ್ 7ರಂದು ಜೆಡಿಎಸ್ ಪಕ್ಷ ಸೇರುತ್ತಿದ್ದೇನೆ. ತಮ್ಮ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಅಂದಹಾಗೇ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಅನ್ನು ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿರೀಕ್ಷೆಯಲ್ಲಿದ್ದರು. ಆದ್ರೇ ಈ ಕ್ಷೇತ್ರಕ್ಕೆ ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ಶ್ರೀನಿವಾಸ ಮಾನೆಗೆ ನೀಡಲಾಗಿತ್ತು.
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅವರು ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಸೇರ್ಪಡೆಗೊಳ್ಳುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ.
ಇನ್ನೂ ಏಪ್ರಿಲ್ 7ರಂದು ಜೆಡಿಎಸ್ ಪಕ್ಷವನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿರುವಂತ ಅವರು, ಹಾನಗಲ್ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.