ಚೆಕ್ ಬೌನ್ಸ್ ಪ್ರಕರಣ: ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

ಚೆಕ್ ಬೌನ್ಸ್ ಪ್ರಕರಣ: ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದಂತ ಮಾಜಿ ಶಾಸಕ ವೈ ಎಸ್ ವಿ ದತ್ತಾ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿ, ಬಿಗ್ ಶಾಕ್ ನೀಡಿದೆ.

ಮಾಜಿ ಶಾಸಕ ವೈ ಎಸ್ ವಿ ದತ್ತಾ ವಿರುದ್ಧ ಸಿ.ಎಸ್ ಸೋಮೇಗೌಡ ಎಂಬುವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆಗೆ ವೈಎಸ್ ವಿ ದತ್ತ ಅವರು ಗೈರು ಹಾಜರಾಗಿದ್ದರು.

ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ಜೆ.ಪ್ರೀತ್ ಅವರು, ಮಾರ್ಚ್ 27ಕ್ಕೆ ಮಾಜಿ ಸಚಿವ ವೈಎಸ್ ವಿ ದತ್ತಾ ಅವರನ್ನು ಕೋರ್ಟ್ ಗೆ ಹಾಜರು ಪಡಿಸುವಂತೆ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿದರು