ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಜನವರಿ 24ರಂದು ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.ಪ್ರತಿಭಟನೆಗೆ ಕೆ.ಎಸ್.ಆರ್.ಟಿ.ಸಿ ಸ್ಟಾಪ್ ಹಾಗೂ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್, ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆ.ಎಸ್.ಆರ್.ಟಿ.ಸಿ ಹಾಗೂ ಎಸ್‌ಟಿ ಎಂಪ್ಲಾಯೀಸ್ ಯೂನಿಯನ್, ಕ.ರಾ.ರ.ಸಾ ಸಂಸ್ಥೆ ಪ.ಜಾ/ ಪ.ಪಂಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಲಿದೆ. 4 ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.