ಜನವರಿ 12ಕ್ಕೆ ಬೆಳಗಾವಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಜನವರಿ 12ಕ್ಕೆ ಬೆಳಗಾವಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಆಗಮಿಸಲಿದ್ದು, ಜ.12 ರಂದು ಎರಡು ದಿನಗಳ 'ರಾಷ್ಟ್ರೀಯ ಯುವಜನೋತ್ಸವ' ಉದ್ಘಾಟನೆಗೆ ಪ್ರಧಾನಿ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭಕ್ಕೆ ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದ ಜನ್ಮದಿನ ಜ.12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ಈ ಅಂಗವಾಗಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.