ಜನವರಿ 18ರಿಂದ ರಾಜ್ಯ ಗುತ್ತಿಗೆದಾರರಿಂದ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದ ಸರಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘ ಜನವರಿ 18ರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಸರಕಾರ ಬಾಕಿ ಇರಿಸಿಕೊಂಡಿರುವ 25 ಸಾವಿರ ಕೋಟಿ ರೂ.
ಲಂಚ ಕೊಡದ ಕಾರಣಕ್ಕೆ ರಾಜ್ಯ ಸರಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿ ಮುಗಿದಿದ್ದರೂ 25 ಸಾವಿರ ಕೋಟಿ ರೂ. ಬಿಡುಗಡೆ ಮಾಡಿಲ್ಲ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ, ನೀರಾವರಿ ಇಲಾಖೆಯಿಂದ 8 ಸಾವಿರ ಕೋಟಿ ಹಾಗೂ ಬಿಬಿಎಂಪಿಯಿಂದ 3 ಸಾವಿರ ಕೋಟಿ ರೂ. ಬಾಕಿ ಇರಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಗುತ್ತಿಗೆದಾರರಿಂದ ಸಚಿವರು, ಹಿರಿಯ ಅಧಿಕಾರಿಗಳು, ಶಾಸಕರು ಲಂಚ ಕೇಳಿರುವ ಆಡಿಯೋ, ವೀಡಿಯೊ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಜನವರಿ 19ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಜನವರಿ 18ರಿಂದ ಕಾಮಗಾರಿ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆಂಪಣ್ಣ ವಿವರಿಸಿದರು.