ಜನವರಿ 28ಕ್ಕೆ ಅಮಿತ್​ ಶಾ ಬೆಳಗಾವಿಗೆ ಆಗಮನ; ಸಾರ್ವಜನಿಕ ಸಭೆಯಲ್ಲಿ ಭಾಗಿ

ಜನವರಿ 28ಕ್ಕೆ ಅಮಿತ್​ ಶಾ ಬೆಳಗಾವಿಗೆ ಆಗಮನ; ಸಾರ್ವಜನಿಕ ಸಭೆಯಲ್ಲಿ ಭಾಗಿ

ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ.

ಅದರಲ್ಲೂ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾನಾ ಕಸರತ್ತು ನಡೆಸುತ್ತಿದ್ದಾರೆ. ಇದರಿಂದಾಗಿ ಕರ್ನಾಟಕದಲ್ಲಿ ಮೋದಿ ಹಾಗೂ ಅಮಿತ್‌ ಶಾ ಹವಾ ಶುರುವಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ, ಚುನಾವಣಾ ಚಾಣಕ್ಯ ಅಮಿತ್ ಶಾ ಇದೇ ತಿಂಗಳು ಬೆಳಗಾವಿಗೆ ಆಗಮಿಸಲಿದ್ದಾರೆ.

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಜಿಲ್ಲೆಯ ಖಾಸಗಿ ಹೊಟೇಲ್​ನಲ್ಲಿ ಸಂಜೆ ಬಿಜೆಪಿಯ ಪದಾಧಿಕಾರಿಗಳು, ಮುಖಂಡರ ಜೊತೆಗೆ ಸಭೆ ನಡೆಸಿ ಜಿಲ್ಲಾ ಬಿಜೆಪಿಯಲ್ಲಿನ ಬಣ ಬಡಿದಾಟ ಶುರುವಾಗಿದೆ.