ಜಮೀನು ವ್ಯಾಜ್ಯ: ಎರಡನೇ ಸ್ಥಾನದಲ್ಲಿ ಕರ್ನಾಟಕ
ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ನೀಡುವ ಪರಿಹಾರಕ್ಕೆ ಸಂಬಂಧಿಸಿ ಕರ್ನಾಟಕದಲ್ಲಿ ಗರಿಷ್ಠ ಸಂಖ್ಯೆಯ ವ್ಯಾಜ್ಯಗಳಿದ್ದು, ರಾಜ್ಯವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಪರಿಹಾರಕ್ಕೆ ಸಂಬಂಧಿಸಿ ದೇಶದಲ್ಲಿ ಒಟ್ಟು 1,74,387 ವ್ಯಾಜ್ಯಗಳಿವೆ. ಈ ಪೈಕಿ ಕರ್ನಾಟಕದಲ್ಲಿ 23,501 ಪ್ರಕರಣಗಳಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.