ಜಾನುವಾರ ವ್ಯಾಪರಿಯ ಹತ್ಯೆ ಆರೋಪ : ಮಂಡ್ಯದಲ್ಲಿ ಪುನೀತ್ ಕೆರೆಯಲ್ಲಿ ಭುಗಿಲೆದ್ದ ಆಕ್ರೋಶ
ಮಂಡ್ಯ : ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಪುನೀತ್ ಕೆರೆಹಳ್ಳಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಮುಸ್ಲಿಂ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ.
ನಿನ್ನೆ ರಾಮನಗರ ಜಿಲ್ಲೆಯ ಸಾತನೂರಿನಲ್ಲಿ 38 ವರ್ಷದ ದನದ ವ್ಯಾಪಾರಿ ಇರ್ಗಿಷ್ ಪಾಷಾ ಎಂಬುವವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪುನೀತ್ ಕೆರೆಹಳ್ಳಿ ಮತ್ತು ತಂಡದಿಂದ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎಂದು ಮುಸ್ಲಿಂ ಸಮುದಾಯ ಆರೋಪ ಮಾಡಿದೆ.
ಮೃತಪಟ್ಟ ಇರ್ಗಿಷ್ ಪಾಷಾ ಮಂಡ್ಯದ ಗುತ್ತುಲು ನಿವಾಸಿಯಾಗಿದ್ದು, ಇರ್ಗಿಷ್ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮುಸ್ಲಿಂ ಸಮುದಾಯ ಆಗ್ರಹಿಸಿದ್ದು, ಇಲ್ಲದಿದ್ದರೆ ಸಮುದಾಯದಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.