ಜುಲೈ 12ರಂದು ಶಿವರಾಜ್ ಕುಮಾರ್ ನಟನೆಯ 123ನೇ ಚಿತ್ರದ ಟೈಟಲ್ ರಿವೀಲ್

ಜುಲೈ 12ರಂದು ಶಿವರಾಜ್ ಕುಮಾರ್ ನಟನೆಯ 123ನೇ ಚಿತ್ರದ ಟೈಟಲ್ ರಿವೀಲ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ 'ಭಜರಂಗಿ 2' ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದ್ದು, ಇದರ ಬೆನ್ನಲ್ಲೇ ಶಿವರಾಜ್ ಅವರ 123ನೇ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ಅನ್ನು ರಿಲೀಸ್ ಮಾಡಲಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ವೊಂದನ್ನು ಈಗಾಗಲೇ ಬಿಡುಗಡೆ ಮಾಡಿದ್ದು. ಪ್ರೇಕ್ಷಕರಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ವಿಜಯ್ ಮಿಲ್ಟನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಈ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಶಿವರಾಜ್ ಕುಮಾರ್ ಅವರಿಗೆ ಚಿತ್ರತಂಡ ಉಡುಗೊರೆ ನೀಡಲಿದೆ.