ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣ: ಆರೋಪಿಯ ಬಂಧನ

ಕಾಸರಗೋಡು: ಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( ೩೩) ಬಂಧಿತ ಆರೋಪಿ. ಗುರುವಾರ ಮಧ್ಯಾಹ್ನ ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಿಂದ ಈತನನ್ನು ಬಂಧಿಸಲಾಗಿದೆ.
ಈತ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದನು. ಈತನ ಸಿಸಿ ಟಿವಿ ದ್ರಶ್ಯಗಳನ್ನು ಮಂಗಳೂರು ಪೊಲೀಸರು ಕೇರಳ ಪೊಲೀಸರಿಗೆ ಹಸ್ತಾ೦ತರಿಸಿದ್ದರು. ಈ ಜಾಡನ್ನು ಹಿಡಿದು ತನಿಖೆ ನಡೆಸಿದ ಕಾಸರಗೋಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಫೆ.೩ ರಂದು ಹಂಪನಕಟ್ಟೆಯ ಜುವೆಲ್ಲರಿಯೊಂದರಲ್ಲಿ ಸಿಬ್ಬಂದಿಯಾಗಿದ್ದ ರಾಘವೇಂದ್ರ ಆಚಾರ್ಯರವರನ್ನು ಹಾಡಹಗಲೇ ಚೂರಿಯಿಂದ ಇರಿದು ಕೊಲೆ ಮಾಡಿದ್ದನು. ಕೃತ್ಯಕ್ಕೆ ಕಾರಣ ಏನೆಂಬುದು ತನಿಖೆಯಿಂದ ತಿಳಿದು ಬಾರಬೇಕಿದೆ. ಇದೀಗ ಆರೋಪಿಯನ್ನು ಮಂಗಳೂರು ಪೊಲೀಸರಿಗೆ ಹಸ್ತಾ೦ತರಿಸಲಾಗಿದೆ.