ಜೆಡಿಎಸ್ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಶೀಘ್ರವೇ ಬಿಜೆಪಿ ಸೇರ್ಪಡೆ
ಬೆಂಗಳೂರು: ಅರಕಲಗೂಡು ವಿಧಾನಸಭೆ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರವೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಶಾಸಕ ಎ.ಟಿ ರಾಮಸ್ವಾಮಿ ಅವರು ನಿನ್ನೆ ಸರ್ಕಾರದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದರು.ಇದೀಗ ಶೀಘ್ರವೇ ಬಿಜೆಪಿಗೆ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಎ.ಟಿ ರಾಮಸ್ವಾಮಿ ಮತ್ತು ಎನ್.ವೈ ಗೋಪಾಲಕೃಷ್ಣ ನಿನ್ನೆ ಒಂದೇ ದಿನ ಶಾಸಕ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಪಕ್ಷದಿಂದ ದೂರವಾಗಿರುವ ಎ.ಟಿ ರಾಮಸ್ವಾಮಿ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತ ಎನ್.ವೈ ಗೋಪಾಲಕೃಷ್ಣ ಅವರು ಬಿಜೆಪಿಗೆ ಗುಡ್ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.