ಜೈಲು ಶಿಕ್ಷೆ ಬಗ್ಗೆ ನಾಳೆ ಗುಜರಾತ್ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಪ್ರಶ್ನೆ: ಮೂಲಗಳು
ನವದೆಹಲಿ: 2019ರ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಇತ್ತೀಚೆಗೆ ಸಂಸತ್ತಿನಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಪರಾಧ ಮತ್ತು ಶಿಕ್ಷೆಯನ್ನು ನಾಳೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಅವರು ತಮ್ಮ ಅರ್ಜಿಯಲ್ಲಿ ಸೆಷನ್ಸ್ ನ್ಯಾಯಾಲಯವನ್ನು ಕೋರಿದ್ದಾರೆ. ಪ್ರಕರಣ ಇತ್ಯರ್ಥವಾಗುವವರೆಗೆ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಅವರು ಕೋರಿದ್ದಾರೆ.