ಟಿಪ್ಪು ಜಯಂತಿ' ಆಚರಣೆ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ಮುಖಂಡರು

ಟಿಪ್ಪು ಜಯಂತಿ' ಆಚರಣೆ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ಮುಖಂಡರು

ಬೆಂಗಳೂರು : ಬೆಂಗಳೂರಿನಲ್ಲಿ ಗುರುವಾರ ಟಿಪ್ಪು ಜಯಂತಿ ಆಚರಣೆ ವೇಳೆ ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರು ಖಡ್ಗ ಝಳಪಿಸಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಂಗಳೂರಿನ ಗುಡ್ಡದಹಳ್ಳಿಯಲ್ಲಿ ಟಿಪ್ಪು ಜಯಂತಿ ಆಚರಣೆಯ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಖಡ್ಗ ಝಳಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಷೇಧಿಸಿದ್ದರೂ ಕಾಂಗ್ರೆಸ್ ನಾಯಕರು ಖಡ್ಗ ಪ್ರದರ್ಶಿಸಿರುವುದು ವಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.