ಟೆಸ್ಟ್ ಪಂದ್ಯದ ವೇಳೆ ಗ್ರೌಂಡ್ನಲ್ಲೇ ಅಸ್ವಸ್ಥರಾದ ಮಾಜಿ ಕ್ಯಾಪ್ಟನ್ ರಿಕಿ ಪಾಂಟಿಂಗ್

ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯಾದ ಮಾಜಿ ಟೆಸ್ಟ್ ನಾಯಕ ರಿಕಿ ಪಾಂಟಿಂಗ್ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಪರ್ತ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಪಾಂಟಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸಹೋದ್ಯೋಗಿಗಳು ಹೇಳಿದ್ದಾರೆ.