ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್​ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ.ವಿಕ್ರಮ್ ಅವರು ಕಿರ್ಲೋಸ್ಕರ್ ಗ್ರೂಪ್‌ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವೀಧರರಾದ ವಿಕ್ರಮ್ ಕಿರ್ಲೋಸ್ಕರ್ ಅವರು ಭಾರತೀಯ ಆಟೋ ವಲಯದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು.